HomeKarnatakaBIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

BIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

ಮಂಗಳೂರು: ಕಡಲ ನಗರಿ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು (33) ಹಾಗೂ ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 2.6 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂ ಡ್ರಗ್ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದರು. ಸುರತ್ಕಲ್ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ನಿಷೇಧಿತ ಎಂಡಿಎಂ ಮಾರಾಟ ಮಾಡುತ್ತಿದ್ದಾಗ ಮಂಗಳೂರು ಸಿದ್ಸಿಬಿ ಪೊಲೀಸರು ದಾಳಿ ನಡೆಸಿ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular