ಅಕ್ರಮವಾಗಿ ಸಾಗಿಸುತ್ತಿದ್ದ 750 ಗ್ರಾಂ ಚಿನ್ನ, ಆರೋಪಿ ವಶಕ್ಕೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯಿಂದ 24 ಕ್ಯಾರೆಟ್ ನ 759 ಗ್ರಾಂ ತೂಕದ 54.39 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಏಪ್ರಿಲ್ 27ರಂದು ದಮಾಮ್ ನಿಂದ ವಿಮಾನದಲ್ಲಿ ಮಂಗಳೂರಿನ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿ ಅನುಮಾನಸ್ಪದವಾಗಿ ವರ್ತಿಸಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಗುದನಾಳದಲ್ಲಿ ಮೂರು ಅಂಡಾಕಾರದ ವಸ್ತುಗಳು ಪತ್ತೆಯಾಗಿವೆ. ಅದರಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದ್ದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ತನಿಖೆ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read