HomeKarnatakaಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಎನ್ಐಎ ತನಿಖೆ: ಆರೋಪಿಗಳು ಶಿವಮೊಗ್ಗಕ್ಕೆ

ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಎನ್ಐಎ ತನಿಖೆ: ಆರೋಪಿಗಳು ಶಿವಮೊಗ್ಗಕ್ಕೆ

ಶಿವಮೊಗ್ಗ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಶಿವಮೊಗ್ಗಕ್ಕೆ ಆರೋಪಿ ಶಾರಿಕ್ ಮತ್ತು ಜಬಿವುಲ್ಲಾ ಅವರನ್ನು ಕರೆದುಕೊಂಡು ಬಂದ ಎನ್ಐಎ ಅಧಿಕಾರಿಗಳ ತಂಡ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದೆ. ಟ್ರಯಲ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಕ್ ಆಗಿದ್ದು, ಪ್ರಕರಣದಲ್ಲಿ ಜಬಿವುಲ್ಲಾ ಪಾತ್ರದ ಬಗ್ಗೆ ಎನ್ಐಎ ತಂಡದಿಂದ ತನಿಖೆ ನಡೆಸಲಾಗಿದೆ. ಜಬಿವುಲ್ಲಾ ಶಿವಮೊಗ್ಗದ ಪ್ರೇಮ್ ಚಂದ್ ಗೆ ಚಾಕು ಇರಿತ ಪ್ರಕರಣದ ಆರೋಪಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವರನ್ನು ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ನಿಲ್ದಾಣದ ಎದುರಿನ ಹೋಟೆಲ್ ಸಮೀಪ ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ನಿನ್ನೆ ರಾತ್ರಿ ಎನ್ಐಎ ಅಧಿಕಾರಿಗಳ ತಂಡದಿಂದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular