HomeKarnatakaBREAKING : ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ; ತುಳುನಾಡಿಗೆ...

BREAKING : ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ; ತುಳುನಾಡಿಗೆ ಸಿಗುತ್ತಾ ಗುಡ್ ನ್ಯೂಸ್ ?

ಮಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕರಾವಳಿ ಭಾಗದ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸ್ಥಳದಲ್ಲೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದು ವಿಶೇಷ ಸಚಿವ ಸಂಪುಟ ಸಭೆಯ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಸರ್ಕಾರ ಮತ್ತಷ್ಟು ವೇಗ ನೀಡಲು ಮುಂದಾಗಿದೆ.

ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಬಂದರು, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಕುರಿತು ಸರ್ಕಾರ ಗಮನಹರಿಸಲಿದೆ. ಈ ಕ್ಷೇತ್ರಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತುಳುನಾಡಿನ ಬಹುಕಾಲದ ಬೇಡಿಕೆಗಳು ಹಾಗೂ ಕರಾವಳಿ ಭಾಗದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಸಿಹಿಸುದ್ದಿ ಸಿಗಬಹುದೇ ಎಂಬ ನಿರೀಕ್ಷೆ ಇದೀಗ ಹೆಚ್ಚಾಗಿದೆ. ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಯಾವೆಲ್ಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಸಿಎಂ ಡಿಕೆಶಿ ವಿಡಿಯೋ ಸಂದೇಶ

ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು, ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ. ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ನಮ್ಮ ಉದ್ದೇಶ. ಬಂದರು, ಮೂಲಸೌಕರ್ಯ, ಮೀನುಗಾರಿಕೆ ಮತ್ತು ಕೈಗಾರಿಕಾ ರಂಗಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

https://x.com/DKShivakumar/status/2099540366634668223/video/1

ವರ್ಲ್ಡ್‌ಸ್ಕಿಲ್ಸ್ ಸ್ಪರ್ಧೆ

ಧಾರವಾಡ : ವರ್ಲ್ಡ್‌ಸ್ಕಿಲ್ಸ್ ಸ್ಪರ್ಧೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಜಗತ್ತಿನ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದೆ. ಮುಂದಿನ ವರ್ಲ್ಡ್‌ಸ್ಕಿಲ್ಸ್ 2028 ಜಾಗತಿಕ ಸ್ಪರ್ಧೆಯು ಜಪಾನ್‌ನ ಐಚಿ ನಗರದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ 2026-27 ಅನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಆಯೋಜಿಸುತ್ತಿದೆ. ಜಪಾನ್‌ನ ಐಚಿಯಲ್ಲಿ ನಡೆಯಲಿರುವ ವರ್ಲ್ಡ್‌ಸ್ಕಿಲ್ಸ್ 2028 ಜಾಗತಿಕ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಬಯಸುವ ಯುವಕ-ಯುವತಿಯರಿಗೆ ಇದೊಂದು ಅಧಿಕೃತ ರಾಜ್ಯಮಟ್ಟದ ವೇದಿಕೆಯಾಗಿದೆ.

ಅರ್ಹತೆ:

63 ವಿವಿಧ ವೃತ್ತಿಪರ ಕೌಶಲ್ಯ ವಿಭಾಗಗಳಲ್ಲಿ ನಿಪುಣತೆ ಹೊಂದಿರುವ 16ರಿಂದ 25 ವರ್ಷ ವಯೋಮಿತಿಯ ಯುವಜನರು ಭಾಗವಹಿಸಬಹುದು.

ಪ್ರೋತ್ಸಾಹ:

ಅತ್ಯುತ್ತಮ ಪ್ರದರ್ಶನ ನೀಡುವ ಅಭ್ಯರ್ಥಿಗಳಿಗೆ ನಗದು ಬಹುಮಾನ ಹಾಗೂ ಉಚಿತವಾಗಿ ಉನ್ನತ ಮಟ್ಟದ ಸುಧಾರಿತ ತರಬೇತಿಯನ್ನು ನೀಡಲಾಗುತ್ತದೆ.

ಸ್ಪರ್ಧೆಯ ಹಂತಗಳು:

ರಾಜ್ಯಮಟ್ಟದಲ್ಲಿ ವಿಜೇತರಾದವರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (NSDC) ಆಯೋಜಿಸುವ ಪ್ರಾದೇಶಿಕ ಹಾಗೂ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುತ್ತಾರೆ. ಅಲ್ಲಿ ಗೆದ್ದು, ಅಂತಿಮವಾಗಿ ಜಾಗತಿಕ ಮಟ್ಟದಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಸುವರ್ಣ ಅವಕಾಶ ಪಡೆಯಬಹುದು.

ನೋಂದಣಿ ಮಾಡಿಕೊಳ್ಳುವ ವಿಧಾನ:

  1. Skill India Digital ವೆಬ್‌ಸೈಟ್‌ಗೆ ಭೇಟಿ ನೀಡಿ: https://www.skillindiadigital.gov.in/home

  2. ಮೇಲ್ಭಾಗದ ಬಲಬದಿಯಲ್ಲಿರುವ IndiaSkills-2026 ಆಯ್ಕೆಯನ್ನು ಕ್ಲಿಕ್ ಮಾಡಿ.

  3. ನಿಮ್ಮ 10 ಅಂಕೆಗಳ ಮೊಬೈಲ್ ಸಂಖ್ಯೆಯನ್ನು ನಮೂದಿಸಿ Continue ಕ್ಲಿಕ್ ಮಾಡಿ.

  4. ಮೊಬೈಲ್‌ಗೆ ಬಂದ OTP ನಮೂದಿಸಿ.

  5. 4 ಅಂಕೆಗಳ ಪಾಸ್‌ವರ್ಡ್ ರಚಿಸಿ.

  6. e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

  7. ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ನೋಂದಣಿ ಸಲ್ಲಿಸಿ.

ಸೆಪ್ಟೆಂಬರ್ 15, 2026ರೊಳಗಾಗಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular