ಬೆಂಗಳೂರು: ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು, ಕರಾವಳಿ ಭಾಗದ ಅಭಿವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೇರಳ, ಗೋವಾ ರಾಜ್ಯಗಳು ಕರಾವಳಿ ಪ್ರದೇಶ ಬಳಸಿಕೊಂಡ ಮಾದರಿಯಲ್ಲೇ ಕರ್ನಾಟಕದಲ್ಲಿಯೂ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಸರ್ಕಾರ ನಿರ್ಧರಿಸಿದೆ. ಪ್ರಾಕೃತಿಕ ಸಂಪತ್ತನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ರಾಜ್ಯದ 350 ಕಿಲೋ ಮೀಟರ್ ಉದ್ದದ ಕರಾವಳಿಯನ್ನು ಸಮೃದ್ಧ ಪರಿಸರ ಪ್ರವಾಸೋದ್ಯಮ ತಾಣವಾಗಿ ರೂಪಿಸಲಾಗುವುದು. ಹೀಗಾಗಿ ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

