HomeKarnatakaಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಮಂಗಳೂರು: ಐಷಾರಾಮಿ ಕಾರೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಅಡ್ಯಾರು ಬಳಿ ನಡುರಸ್ತೆಯಲ್ಲಿಯೇ BMW ಕಾರಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular