HomeLatest NewsBREAKING: ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಐವರು ಆರೋಪಿಗಳು ಅರೆಸ್ಟ್

BREAKING: ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಐವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಸಿಇಎನ್ ಠಾಣೆ ಪೊಲೀಸರು ಬೇಧಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ತಮ್ಮ ಮಕ್ಕಳ ಡ್ರಗ್ಸ್ ಅಡಿಕ್ಟ್ ಬಗ್ಗೆ ಇಬ್ಬರು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೋಷಕರ ದೂರಿನ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ತುಷಾರ್( 21) ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತ ಆರೋಪಿಗಳು.

ಮಂಗಳೂರಿನ ಪಡುಶೆಡ್ಡೆ ಗ್ರಾದ ಹಾಲಾಡಿ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಜ್ಜಾಗುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷದ 20 ಸಾವಿರ ಮೌಲ್ಯದ ಗಾಅಂಜಾ ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತುಗಳನ್ನು ಮಾರುತ್ತಿದ್ದರು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular