‘ಮಂಗಳೂರು ದಸರಾ’ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರ ಪ್ರದರ್ಶನಕ್ಕೆ ಬ್ರೇಕ್

ಮಂಗಳೂರು : ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಗಳ ಪ್ರದರ್ಶನಕ್ಕೆ  ಬ್ರೇಕ್ ಹಾಕಲಾಗಿದೆ.

ಹೌದು. ಇತ್ತೀಚೆಗೆ ದೈವದ ವೇಷ ಹಾಕಿ ಅಪಮಾನ ಮಾಡುತ್ತಿರುವ ಪ್ರಕರಣ ಹೆಚ್ಚಾದ ಹಿನ್ನೆಲೆ ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಗಳ ಪ್ರದರ್ಶನಕ್ಕೆ ಹಾಗೂ ಡಿಜೆಗೂ ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿ ಬ್ರೇಕ್ ಹಾಕಿದೆ.

ಈ ಬಾರಿಯ ದಸರಾ ಮೆರವಣಿಗೆ ಅಕ್ಟೋಬರ್ 25ರಂದು ನಡೆಯಲಿದ್ದು, ತುಳುನಾಡಿನ ದೈವಗಳ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ ಎಂದು ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹೇಳಿದೆ. ಮೆರವಣಿಗೆಯಲ್ಲಿ ಡಿಜೆಗೆ ನಿಷೇಧ ಹಾಕಲಾಗಿದ್ದು, ಭಜನಾ ತಂಡಗಳ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಮೈಸೂರು ದಸರಾದಂತೆ ಮಂಗಳೂರು ದಸರಾ ಕೂಡಾ ಪ್ರಸಿದ್ಧಿ ಪಡೆದಿದೆ. ಅಲ್ಲದೆ ಕರಾವಳಿ ಭಾಗದ ದೇವಸ್ಥಾನಗಳಲ್ಲಿ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿರುವ ಕಾರಣ ಮಂಗಳೂರು ಸೇರಿದಂತೆ ಕರಾವಳಿ ಭಾಗಕ್ಕೆ ದಸರಾ ಸಂದರ್ಭದಲ್ಲಿ ಭಾರಿ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read