ಮಂಗಳೂರು: ಹುಕ್ಕಾ ಬಾರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮೂವರನ್ನು ಬಂಧಿಸಿದ್ದಾರೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡನಾಡಿಯಲ್ಲಿನ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿ ಬ್ಲ್ಯಾಕ್ ಮೂನ್ ರೆಸ್ಟೋ ಕೆಫೆ ಹೆಸರಿನಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಸಿದ್ದಿಕ್, ಅಬ್ದುಲ್ ನಾಸಿರ್ ಹಾಗೂ ಸಫ್ವಾನ್ ಎಂಬ ಮೂವರನ್ನು ಬಂಧಿಸಿದ್ದಾರೆ. ಬಂಧಿತರು 2024ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದರು. ಕೆಫೆಟೇರಿಯಾ ಹೆಸರಲ್ಲಿ ಹುಕ್ಕಾ ಬಾರ್ ನಡೆಸುತ್ತಾ ಗ್ರಾಹಕರನ್ನು ಮಾದಕ ಲೋಕದಲ್ಲಿ ತೇಲಿಸಿ ಹಣ ಸಂಪಾದಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಬಂಧಿತರಿಂದ ಹುಕ್ಕಾ ಸೇದುವ ಉಪಕರಣ, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.