HomeKarnatakaBIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

BIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ವಸ್ತುಗಳು ದಾಳಿ ವೇಳೆ ಪತ್ತೆಯಾಗಿವೆ.

ಅಲ್ಲದೇ ದಾಳಿ ವೇಳೆ 25 ಮೊಬೈಲ್ ಗಳು, ಒಂದು ಬ್ಲೂಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್. ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೈಲು ಖೈದಿಗಳ ಬಳಿ ಪತ್ತೆಯಾದ ಗಾಂಜಾ, ಡ್ರಗ್ಸ್ ಪ್ಯಾಕೇಟ್ ಗಳನ್ನು ಜಪ್ತಿ ಮಾಡಿದ್ದಾರೆ. ಜೈಲಿನಲ್ಲಿ ಡ್ರಗ್ಸ್, ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular