HomeLatest NewsGood News: ಮಸ್ಕತ್-ಮಂಗಳೂರು ನೇರ ವಿಮಾನ ಸೇವೆ

Good News: ಮಸ್ಕತ್-ಮಂಗಳೂರು ನೇರ ವಿಮಾನ ಸೇವೆ

ಕರ್ನಾಟಕದ ಕರಾವಳಿ ಭಾಗದ ಜನರಿಗೆ ವಿಮಾನ ಸೇವೆ ಕುರಿತು ಅಪ್‌ಡೇಟ್ ಇದೆ. ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನ ಸೇವೆ ಪುನಃ ಆರಂಭವಾಗಲಿದೆ.

ಈ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.

ಸಂಸದರು ತಮ್ಮ ಪೋಸ್ಟ್‌ನಲ್ಲಿ, ‘ಮಸ್ಕತ್ ಮತ್ತು ಮಂಗಳೂರು ನೇರ ವಿಮಾನ ಸೇವೆಯನ್ನು ಪುನರಾರಂಭಿಸುವ ಕುರಿತು ನಾನು ಕೇಂದ್ರದ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜರಾಪು ಇವರಿಗೆ ಪತ್ರ ವ್ಯವಹಾರವನ್ನು ಮಾಡಿ ವಿನಂತಿಸಿದ್ದೆ’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಈ ಪತ್ರಕ್ಕೆ ಉತ್ತರಿಸಿದ ಕೇಂದ್ರ ಸಚಿವರು ಈಗಾಗಲೇ ನಿಮ್ಮ ಪತ್ರದ ಅನ್ವಯ ಏರ್ ಇಂಡಿಯಾ ಲಿಮಿಟೆಡ್‌ನೊಂದಿಗೆ ಸಮಾಲೋಚನೆ ಮಾಡಿದ್ದು, ಇದೀಗ ಏರ್ ಇಂಡಿಯಾ ಸಂಸ್ಥೆಯು ಮಾರ್ಚ್ 2026 ರಿಂದ ಮಸ್ಕತ್ ಮತ್ತು ಮಂಗಳೂರು ಮಾರ್ಗದಲ್ಲಿ ವಿಮಾನಯಾನ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಪತ್ರದ ಮೂಲಕ ಸ್ಪಷ್ಟವಾಗಿ ತಿಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ನನ್ನ ಪತ್ರವನ್ನು ಅತ್ಯಂತ ಮುತುವರ್ಜಿಯಿಂದ ಗಮನಿಸಿ ಪರಿಹಾರ ಒದಗಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು ಎಂದು ಸಂಸದರು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular