HomeKarnatakaಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ

ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ನಂತರ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ.

ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ರೋಡ್ ಶೋ ಆರಂಭವಾಗಿದೆ. ರಸ್ತೆಯ ಎರಡೂ ಬದಿಗಳಲ್ಲಿ ಜನ ಕಿಕ್ಕಿರಿದು ಸೇರಿದ್ದಾರೆ. ಸುಮಾರು ಎರಡು ಕಿಲೋಮೀಟರ್ ದೂರ ಪ್ರಧಾನಿಯವರ ರೋಡ್ ಶೋ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ, ಮೋದಿ ಪರ ಜಯಘೋಷ ಮೊಳಗಿದ್ದು, ಅಭಿಮಾನಿಗಳು ಹೂವಿನ ಮಳೆ ಸುರಿಸಿದ್ದಾರೆ. ಜೈಶ್ರೀರಾಮ್ ಘೋಷಣೆಯಂತೂ ಮುಗಿಲು ಮುಟ್ಟಿದೆ. ದಾರಿಯುದ್ದಕ್ಕೂ ಮೋದಿ ಕಮಲದ ಚಿಹ್ನೆ ಕೈಯಲ್ಲಿಡಿದು ಜನರತ್ತ ಕೈ ಬೀಸಿದ್ದಾರೆ. ಅವರಿಗೆ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ ಸಾಥ್ ನೀಡಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular