HomeKarnatakaಆ. 6 ರಂದು ಮಂಗಳೂರಿನಲ್ಲಿ ವಿಶ್ವದರ್ಜೆ ರೈಲು ನಿಲ್ದಾಣಕ್ಕೆ ಮೋದಿ ಶಿಲಾನ್ಯಾಸ

ಆ. 6 ರಂದು ಮಂಗಳೂರಿನಲ್ಲಿ ವಿಶ್ವದರ್ಜೆ ರೈಲು ನಿಲ್ದಾಣಕ್ಕೆ ಮೋದಿ ಶಿಲಾನ್ಯಾಸ

ಮಂಗಳೂರು: ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆ ರೈಲು ನಿಲ್ದಾಣವಾಗಿ ನಿರ್ಮಿಸಲಿದ್ದು, ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು 19.32 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023 -24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ, ಮಂಗಳೂರು ಕೇಂದ್ರ ರೈಲು ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿಪಡಿಸುವುದಾಗಿ ಹೇಳಲಾಗಿತ್ತು. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular