HomeKarnatakaBREAKING: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆ ಯತ್ನ

BREAKING: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆ ಯತ್ನ

ಮಂಗಳೂರು: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಅವಳಿ ಕೊಲೆ ಕೇಸ್ ನಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ ಹಮೀದ್ ಗೆ ಚೂರಿಯಿಂದ ಇರಿದು ಕೊಲೆಗೈಯಲು ಪ್ರಯತ್ನ ನಡೆದಿದೆ.

2011ರ ಜೂನ್ 28ರಂದು ಚೂರಿಯಿಂದ ಇರಿದು ರಜಿಯಾ ಮತ್ತು ಮಗು ಫಾತಿಮಾ ಜುವಾ ಅವರ ಹತ್ಯೆಯಾಗಿತ್ತು. ಕರಾವಳಿ ಭಾಗದಲ್ಲಿ ಪಂಜಿಮೊಗರು ಪ್ರಕರಣ ಸಂಚಲನ ಸೃಷ್ಟಿಸಿತ್ತು. ಪತಿ ಹಮೀದ್ ಮನೆಯಿಂದ ಹೊರಹೋದ 30 ನಿಮಿಷ ನಂತರ ಹತ್ಯೆ ನಡೆದಿದ್ದು, ಹಮೀದ್ ವಿರುದ್ಧ ಆರೋಪ ಕೇಳಿ ಬಂದಿತ್ತು.

13 ವರ್ಷ ಕಳೆದರೂ ಅವಳಿ ಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆಯಾದರೂ ಹಂತಕರು ಇನ್ನು ಸಿಕ್ಕಿಲ್ಲ. ಪೊಲೀಸರ ತನಿಖೆಯಲ್ಲಿ ಹಮೀದ್ ಕೈವಾಡವಿಲ್ಲವೆಂದು ವರದಿ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಹಮೀದ್ ಗೆ ಚೂರಿಯಿಂದ ಇರಿದು ಹತ್ಯೆ ಮಾಡಲು ಪ್ರಯತ್ನಿಸಲಾಗಿದೆ. ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಣಕಾಸು ವಿಚಾರವಾಗಿ ಮಂಗಳೂರಿನ ಖ್ಯಾತ ಈಜುಪಟು ಹತ್ಯೆಗೆ ಯತ್ನಿಸಿರುವ ಅನುಮಾನ ವ್ಯಕ್ತವಾಗಿದೆ. ಘಟನೆಯ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular