HomeLatest NewsBIG UPDATE : ಮಂಗಳೂರಿನಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಇಬ್ಬರು ಮಕ್ಕಳು...

BIG UPDATE : ಮಂಗಳೂರಿನಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಇಬ್ಬರು ಮಕ್ಕಳು ಸೇರಿ ಮೂವರು ಸಾವು.!

ಮಂಗಳೂರು : ಮಂಗಳೂರಿನಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಅಜ್ಜಿ ಪ್ರೇಮ ಪೂಜಾರಿ ಹಾಗೂ ಇಬ್ಬರು ಮಕ್ಕಳು (ಮೊಮ್ಮಕ್ಕಳು) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿಸಲ್ಪಟ್ಟಿದ್ದ ಮಗು ಆರುಷ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದು, ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು.
ಕಾಂತಪ್ಪ ಪೂಜಾರಿ ಅವಶೇಷಗಳಡಿಯಿಂದ ಹೊರಬಂದು ಬಚಾವ್ ಆಗಿದ್ದರು. ಮಣ್ಣಿನಡಿ ಸಿಲುಕಿದ್ದ ಅವರ ಪತ್ನಿ ಪ್ರೇಮಾ ಪೂಜಾರಿ (58) ಹಾಗೂ ಮೊಮ್ಮಗ ಆರ್ಯನ್ ಇಬ್ಬರು ಸಾವನ್ನಪ್ಪಿದ್ದರು. ಸೊಸೆ ಅಶ್ವಿನಿ ಹಾಗೂ ಅವರ ಮಗು ಆರುಷ್ ರಕ್ಷಣೆಗಾಗಿ ನಿರಂತರ 10 ಗಂಟೆಗಳ ಕಾಲ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್ಫ್. ತಂಡ ಕಾರ್ಯಾಚರಣೆ ನಡೆಸಿತ್ತು. ಸತತ ಕಾರ್ಯಾಚರಣೆ ಬಳಿಕ ಮಗು ಆರುಷ್ ನನ್ನು ಹಾಗೂ ಅಶ್ವಿನಿ ಅವರನ್ನು ಸುರಕ್ಷಿತವಾಗಿ ಹೊರತಲರಾಗಿತ್ತು. ಆದರೆ ರಕ್ಷಿಸಿದ್ದ ಮಗು ಕೂಡ ಸಾವನ್ನಪ್ಪಿದೆ. ಅವಶೇಷಗಳ ಅಡಿಯಿಂದ ರಕ್ಷಿಸಲ್ಪಟ್ಟ ಮಗು ಆರುಷ್ ನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬುಲೆನ್ಸ್ ನಲ್ಲಿ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ತಾಯಿ ಅಶ್ವಿನಿ ತನ್ನ ಇಬ್ಬರು ಮಕ್ಕಳಾದ ಆರ್ಯನ್ ಹಾಗೂ ಆರುಷ್ ನನ್ನು ಕಳೆದುಕೊಂಡಿದ್ದಾರೆ. ಅಶ್ವಿನಿ ಸ್ಥಿತಿಯೂ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular