ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಇಂಡಿಯಾನ ಕನ್ವೆನ್ ಶನ್ ಸೆಂಟರ್ ನಲ್ಲಿ ಕುರಾನ್ ಪಠಣ ಸ್ಪರ್ಧೆಯ ವಿಡಿಯೋ ಫೇಸ್ ಬುಕ್ ನಲ್ಲಿ ಪ್ರಸಾರವಾಗಿತ್ತು. ಇದಕ್ಕೆ ಗಣೇಶ್ ಪ್ರಸಾದ್, ಮಕ್ಕಳ ಬ್ರೇನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ ಎಂದು ಕಮೆಂಟ್ ಹಾಕಿದ್ದ.
ಈ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿದ ಆರೋಪದಲ್ಲಿ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.

