HomeLatest Newsಕಲುಷಿತ ನೀರು ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಮಂಗಳೂರು: ಪಾಲಿಕೆಯಿಂದ ಸರಬರಾಜಾಗುತ್ತಿರುವ ಕಲುಷಿತ ಕುಡಿಯುವ ನೀರನ್ನು ಸೇವಿಸಿ ನೂರಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ತೀವ್ರ ಅಸ್ವಸ್ಥರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆಯ (MCC) ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದ ಬಿಜೈ ನ್ಯೂರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರು-ನಾಲ್ಕು ವಾರಗಳಿಂದ ಮನೆಯ ಟ್ಯಾಪ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರನ್ನು ಬಳಸಿದ ಹಿರಿಯ ನಾಗರಿಕರು ಮತ್ತು ಮಕ್ಕಳು ತೀವ್ರವಾದ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.

ಪ್ರಾರಂಭದಲ್ಲಿ ಇದು ಸಾಮಾನ್ಯ ಇನ್ಫೆಕ್ಷನ್ ಎಂದುಕೊಂಡಿದ್ದ ಜನರಿಗೆ, ಇಡೀ ಬಡಾವಣೆಯ ನೂರಕ್ಕೂ ಹೆಚ್ಚು ಮನೆಗಳಲ್ಲಿ ಇದೇ ಪರಿಸ್ಥಿತಿ ಇರುವುದು ಕಂಡುಬಂದಾಗ ಆತಂಕ ಮೂಡಿದೆ. ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಸ್ಥಳೀಯ ನಾಗರಿಕರು, ಆರೋಗ್ಯ ಇಲಾಖೆಯ ಮೂಲಕ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿದ್ದಾರೆ. ವರದಿಯಲ್ಲಿ ಬಂದಿರುವ ಸಂಗತಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಲಿಕೆ ಸರಬರಾಜು ಮಾಡುತ್ತಿರುವ ಈ ನೀರು ‘ಕುಡಿಯಲು ಯಾವುದೇ ಕಾರಣಕ್ಕೂ ಯೋಗ್ಯವಲ್ಲ’ ಎಂದು ಲ್ಯಾಬ್ ವರದಿಯಲ್ಲಿ ಅಧಿಕೃತವಾಗಿ ದೃಢಪಟ್ಟಿದೆ. ವರದಿ ಹೊರಬೀಳುತ್ತಿದ್ದಂತೆ ಕಂಗಾಲಾಗಿರುವ ಬಿಜೈ ನಿವಾಸಿಗಳು ಸದ್ಯ ದುಬಾರಿ ಹಣ ಕೊಟ್ಟು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಖರೀದಿಸುತ್ತಿದ್ದಾರೆ.

ನಗರದ ಹಲವೆಡೆ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಒಳಚರಂಡಿ ಪೈಪ್‌ಲೈನ್‌ಗಳನ್ನು ಒಟ್ಟೊಟ್ಟಿಗೇ ಅಳವಡಿಸಲಾಗಿದೆ. ಇತ್ತೀಚೆಗೆ ನಡೆದ ಯಾವುದೋ ದುರಸ್ತಿ ಕಾಮಗಾರಿಗಳ ವೇಳೆ ಜೆಸಿಬಿ ತಗುಲಿ ಅಥವಾ ಪೈಪ್‌ಗಳು ಒಡೆದು ಹೋಗಿ, ಡ್ರೈನೇಜ್ ನೀರು ನೇರವಾಗಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ತೂರಿ ಮಿಶ್ರಣವಾಗಿರುವ ಬಲವಾದ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಪಾಲಿಕೆಯ ತಾಂತ್ರಿಕ ಇಂಜಿನಿಯರ್‌ಗಳು ತಕ್ಷಣವೇ ಪರಿಶೀಲನೆ ನಡೆಸಿ ಲೀಕೇಜ್ ಪತ್ತೆ ಹಚ್ಚಬೇಕು ಎಂದು ಜನರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular