HomeKarnatakaBREAKING: ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿ ಕಾರು ಅಡ್ದಗಟ್ಟಿದ ದುಷ್ಕರ್ಮಿಗಳು: ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ...

BREAKING: ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿ ಕಾರು ಅಡ್ದಗಟ್ಟಿದ ದುಷ್ಕರ್ಮಿಗಳು: ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿ ಪರಾರಿ

ಮಂಗಳೂರು: ಮಹಾರಾಷ್ಟ್ರದಿಂದ ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಕೇರಳದ ಚಿನ್ನದ ವ್ಯಾಪಾರಿ ಕುಟುಂಬವನ್ನು ತಡೆದು ದುಷ್ಕರ್ಮಿಗಳು ಸಿನಿಮಾ ಸ್ಟೈಲ್ ನಲ್ಲಿ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾರಿನಲ್ಲಿ ತೆರಳುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಕುಟುಂಬವನ್ನು ಬೈಕಂಪಾಡಿ ಹೆದ್ದಾರಿಯಲ್ಲಿ ಅಡ್ಡಗಟ್ಟಿದ ದರೋಡೆಕೋರರು, ಅವರ ಪತ್ನಿ-ಮಗನನ್ನು ಬೆದರಿಸಿ ಕಾರಿನಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ನಗದಿನೊಂದಿಗೆ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರ ಮೂಲದ ಚಿನ್ನದ ವ್ಯಾಪಾರಿ ವಿಕಾಸ್, ಕೇರಳದ ಪಯ್ಯನ್ನೂರಿನಲ್ಲಿ ವಾಸವಾಗಿದ್ದಾರೆ. ಸಾಂಗ್ಲಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಕುಟುಂಬ ಸಮೇತರಾಗಿ ಕೇರಳಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಬೈಕಂಪಾಡಿ ಬಳಿ 2 ಇನ್ನೋವಾ, 1 ಸ್ವಿಫ್ಟ್ ಕಾರಿನಲ್ಲಿ ಬಂದ ದರೋಡೆಕೋರರು ವಿಕಾಸ್ ಹಾಗೂ ಕುಟುಂಬ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ವಿಕಾಸ್ ಹಾಗೂ ಪತ್ನಿ, ಪುತ್ರನನ್ನು ಹೆದರಿಸಿ ಅವರ ಬಳಿ ಇದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿಕಾಸ್ ಹಾಗೂ ಕುಟುಂಬ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular