HomeKarnatakaಕೆಲಸಕ್ಕೆಂದು ಹೋದ ಯುವಕ ಏಕಾಏಕಿ ನಾಪತ್ತೆ: ಸೋಮೇಶ್ವರ ಕೆರೆಯಲ್ಲಿ ಶವವಾಗಿ ಪತ್ತೆ

ಕೆಲಸಕ್ಕೆಂದು ಹೋದ ಯುವಕ ಏಕಾಏಕಿ ನಾಪತ್ತೆ: ಸೋಮೇಶ್ವರ ಕೆರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋದ ಯುವಕನೊಬ್ಬ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಇದೀಗ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಗ್ರಾಮದ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್​ ಎಂಬವರ ಪುತ್ರ ವಿವೇಕ್​ ಶೆಟ್ಟಿಗಾರ್ (32) ಮೃತ ದುರ್ದವಿ.

ನಾಪತ್ತೆಯಾಗಿದ್ದ ವಿವೇಕ್ ತನ್ನ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಬಿಟ್ಟು ನಾಪತ್ತೆಯಾಗಿದ್ದ. ವಿವೇಕ್ ಶೆಟ್ಟಿಗಾರ್ ಸುಮಾರು ಎಂಟು ತಿಂಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವೇಕ್​ ಶೆಟ್ಟಿಗಾರ್​ ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೋರ್ಟಾಸ್​ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸಾಗುತ್ತಿದ್ದ. ಅದರಂತೆ, ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್, ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿ, ಮನೆಗೆ ಬರಲು ತಡವಾಗಬಹುದು, ನನಗಾಗಿ ಕಾಯಬೇಡಿ ಎಂದು ಹೇಳಿದ್ದ. ಆದರೆ, ರಾತ್ರಿ 12 ಗಂಟೆಯಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತನ ಮೊಬೈಲ್​ಗೆ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಿಲ್ಲ.

ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್‌ಗೆ ಕರೆ ಮಾಡಿದಾಗ ಸಂಪರ್ಕವಾಗಿರಲಿಲ್ಲ. ಬಳಿಕ ವಿವೇಕ್ ಕೆಲಸ ಮಾಡುತ್ತಿದ್ದ ಕಂಪೆನಿಗೆ ಕರೆ ಮಾಡಿ ವಿಚಾರಿಸಿದಾಗ ಕಂಪೆನಿ ಬಂದ್ ಆಗಿರುವುದಾಗಿ ತಿಳಿದು ಬಂದಿದೆ.

ನಂತರ ಕುಟುಂಬಸ್ಥರು ಹಾಗೂ ಪರಿಚಿತರ ಬಳಿ ವಿಚಾರಿಸಿದರೂ ವಿವೇಕ್ ಶೆಟ್ಟಿಗಾರ್ ಅವರ ಬಗ್ಗೆ ಯಾವುದೇ ಮಾಹಿತಿ ಸಿಗದೇ ಇದ್ದುದರಿಂದ ಅವರು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದರು. ಈಗ ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನಾ? ಅಥವಾ ಕೊಲೆಯೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular