HomeKarnatakaಯುವಕ ಆಶಿಕ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಯುವಕ ಆಶಿಕ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮಂಗಳೂರು: ಮಂಗಳೂರಿನ ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ.

ಪ್ರೀತಿಸಿದ ಯುವತಿಯ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿರಲಿಲ್ಲ. ಬಳಿಕ ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜು ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಆಶಿಕ್ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ವಿಚಾರ ಎರಡೂ ಕುಟುಂಬಕ್ಕೆ ಗೊತ್ತಿತ್ತು. ಈ ನಡುವೆ ಕೆಲ‌ ಸಮಯದಿಂದ ಆಶಿಕ್​​ನಿಂದ ಯುವತಿ ದೂರವಾಗಿದ್ದಳು ಎನ್ನಲಾಗಿದೆ. ಹೀಗಾಗಿ ಆಶಿಕ್ ಯುವತಿಯನ್ನು ನೀನು ನನಗೆ ಮೋಸ ಮಾಡುತ್ತಿದ್ದೀಯಾ? ಎಂದು ಕೇಳಿದ್ದನಂತೆ. ಯುವತಿ ಆತನಿಗೆ ಸಾಯುವಂತೆ ಹೇಳಿದ್ದಳು ಎನ್ನಲಾಗಿದೆ. ಈ ಬಗ್ಗೆ ಸಾವಿಗೂ ಮುನ್ನ ಇಬ್ಬರ ನಡುವೆ ನಡೆದಿರುವ ಮಾತುಕತೆಗಳು, ವಾಟ್ಸ್ಯಾಪ್​​ ಚಾಟ್​​ನನಲ್ಲಿ ಬಹಿರಂಗವಾಗಿದೆ. ಸಾವಿಗೂ ಮುನ್ನ ವಿಡಿಯೋ ಕಾಲ್​​ನಲ್ಲಿ ಇಬ್ಬರು ಮಾತನಾಡಿದ್ದರು ಎಂಬುದೂ ಗೊತ್ತಾಗಿದೆ.

ಆಶಿಕ್​​ ಜೊತೆ ಮಾತನಾಡುವ ವೇಳೆ ಅವಾಚ್ಯ ಶಬ್ದಗಳಿಂದ ಯುವತಿ ನಿಂದಿಸಿದ್ದು, ಇದರಿಂದ ಆಶಿಕ್​​ ಮಾನಸಿಕವಾಗಿ ನೊಂದು ಅದೇ ದಿನ ರಾತ್ರಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನ ತಂದೆ ನೀಡಿದ್ದ ದೂರಿನ ಅನ್ವಯ ಕಾವೂರು ಠಾಣೆ ಪೊಲೀಸರು BNS 108, 352,351(3),3(5) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular