BIG NEWS: ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಮಾವು ಖರೀದಿ, ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ 101 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು: ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಾವು ಖರೀದಿ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಕಾಳಜಿ, ನಿರಂತರ ಪ್ರಯತ್ನದಿಂದಾಗಿ ತಕ್ಷಣ ಹಣ ಬಿಡುಗಡೆಗೆ ಸರ್ಕಾರಿ ‌ಅದೇಶ ಹೊರ ಬಿದ್ದಿದೆ. ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.

ಅಲ್ಲದೆ ಈಗಾಗಲೇ ಘೋಷಿಸಿರುವಂತೆ ಶೇ 50% ರಷ್ಟು ಮೊತ್ತವನ್ನು ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಲು ಸಹ ಕ್ರಮ ವಹಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

ರಾಜ್ಯದಲ್ಲಿ ಮಾವು ಬೆಲೆ ಕುಸಿತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ‌ ಸೆಳೆದು, ಮನವಿಗಳನ್ನು ಅರ್ಪಿಸಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ ಕೆಂದ್ರ ಕೃಷಿ ಸಚಿವರ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗೆಳೆರೆಡು ಶೇ 50-50 ಅನುಪಾತದಲ್ಲಿ ಯೋಜನೆ ಅನುಷ್ಠಾನಕ್ಕೆ ಕಳೆದ ವಾರ ಆದೇಶ ಹೊರಡಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಖರೀದಿಗೆ ಬೇಕಾದ 101 ಕೋಟಿ ರೂ ಹಣ ಬಿಡುಗಡೆಗೆ ಆದೇಶ ಹೊರಡಿಸಿ ಸುಗಮ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read