HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಮ್ಯಾನ್ ಹೋಲ್ ಗೆ ಇಳಿದಿದ್ದ ಮೂವರು ಕಾರ್ಮಿಕರು ಅಸ್ವಸ್ಥ

BREAKING: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಮ್ಯಾನ್ ಹೋಲ್ ಗೆ ಇಳಿದಿದ್ದ ಮೂವರು ಕಾರ್ಮಿಕರು ಅಸ್ವಸ್ಥ

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛತೆಗೆದೆಂದು ಇಳಿದಿದ್ದ ಮೂವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ನಡೆದಿದೆ.

ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಅಧಿಕಾರಿಗಳು ಮ್ಯಾನ್ ಹೋಲ್ ಸ್ವಚ್ಛತಾ ಕಾರ್ಯಕ್ಕೆ ಮೂವರು ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಿದ್ದರು. ಈ ವೇಳೆ ವಿಷಾನೀಲ ಸೇವನೆ, ಆಮ್ಲಜನಕ ಕೊರತೆಯಿಂದಾಗಿ ಮೂವರು ಕಾರ್ಮಿಕರು ತೀವ್ರ ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ಕಾರ್ಮಿಕ ಚರಂಡಿಯೊಳಗೇ ಕುಸಿದು ಬಿದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಸ್ಥಳೀಯರ ಸಹಾಯದಿಂದ ಮೂವರು ಕಾರ್ಮಿಕರನ್ನು ಮ್ಯಾನ್ ಹೋಲ್ ನಿಂದ ಮೇಲಕ್ಕೆತಲಾಗಿದ್ದು, ಅಸ್ವಸ್ಥ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular