ಇಂಫಾಲ್: ಐದು ನಿಷೇಧಿತ ಸಂಘಟನೆಗಳ ಆರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ಮಣಿಪುರದಲ್ಲಿ ನಡೆದಿದೆ.
ಮಣಿಪುರದ ಬಿಷ್ಣುಪುರ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರು ಉಗ್ರರನ್ನು ಬಂಧಿಸಲಾಗಿದೆ.
ನಿಷೇಧಿತ ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ ಸಕ್ರಿಯ ಮಹಿಳಾ ಕೇಡರ್ ನ್ನು ಇಂಫಾಲ್ ಪಶ್ಚಿಮದ ಚಿಂಗ್ ಮೈರಾಂಗ್ ನಲ್ಲಿ ಬಂಧಿಸಲಾಗಿದೆ. ಅಲ್ಲದೇ ಕೆಸಿಪಿಯ ಇಬ್ಬರು ಸಕ್ರಿಯ ಕಾರ್ಯಕರ್ತರನ್ನು ಫಯೆಂಗ್ ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.