ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ 17 ತಿಂಗಳ ನಂತರ ಮನೀಶ್ ಸಿಸೋಡಿಯಾ ಜಾಮೀನಿನ ಮೇಲೆ ಹೊರಬಂದಿದ್ದಾರೆ.
17 ತಿಂಗಳ ಸೆರೆವಾಸದ ನಂತರ ತಿಹಾರ್ ಜೈಲಿನಿಂದ ಹೊರ ಬಂದ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.
ಜೈಲು ಆವರಣದಿಂದ ಹೊರಬಂದ ಕೂಡಲೇ ಸಿಸೋಡಿಯಾ ಅವರನ್ನು ದೆಹಲಿ ಸಚಿವೆ ಅತಿಶಿ ಮತ್ತು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸ್ವಾಗತಿಸಿದರು. ಅವರನ್ನು ಸ್ವಾಗತಿಸಲು ಎಎಪಿ ಕಾರ್ಯಕರ್ತರು ಬೆಂಬಲಿಗರು ತಿಹಾರ್ ಜೈಲಿನ ಹೊರಗೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಮದ್ಯದ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕನನ್ನು ಬಿಡುಗಡೆ ಮಾಡಲಾಗಿದೆ.
ಜೈಲಿನಿಂದ ಹೊರಬಂದ ಕೂಡಲೇ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಸೋಡಿಯಾ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
https://twitter.com/ANI/status/1821901977108046262
https://twitter.com/ANI/status/1821903033367666779