HomeKarnatakaಚಿಕ್ಕಬಳ್ಳಾಪುರದಲ್ಲಿ ಮೂವರು ಸುಧಾಕರ್, ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರು ಮಂಜುನಾಥ್, ಮೂವರು ಸುರೇಶ್...!

ಚಿಕ್ಕಬಳ್ಳಾಪುರದಲ್ಲಿ ಮೂವರು ಸುಧಾಕರ್, ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರು ಮಂಜುನಾಥ್, ಮೂವರು ಸುರೇಶ್…!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರೊಂದಿಗೆ ಅದೇ ಹೆಸರಿನ ಇನ್ನೂ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎನ್. ಸುಧಾಕರ್ ಮತ್ತು ಡಿ. ಸುಧಾಕರ್ ಹೆಸರಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಂಜುನಾಥ್ ಹೆಸರಿನ ಇಬ್ಬರು ಮತ್ತು ಸುರೇಶ್ ಹೆಸರಿನ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಜುನಾಥ್ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಮೂವರು ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಬಹುಜನ ಭಾರತ ಪಕ್ಷದ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಉಳಿದುಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್, ಕರುನಾಡ ಪಾರ್ಟಿಯ ಸುರೇಶ್ ಎಸ್., ಪಕ್ಷೇತರ ಅಭ್ಯರ್ಥಿ ಸುರೇಶ್ ಎಂ. ಎನ್. ಕೂಡ ಸ್ಪರ್ಧೆಯಲ್ಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular