‘ಮನಮೋಹನ್ ಸಿಂಗ್ ನನ್ನ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಕ’: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ವೈಯಕ್ತಿಕವಾಗಿಯೂ ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರು ತಮ್ಮ ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರು.. ಬುದ್ಧಿವಂತಿಕೆ, ಉದಾತ್ತತೆ ಮತ್ತು ನಮ್ರತೆಯ ಪ್ರತಿರೂಪವಾಗಿದ್ದ ನಾಯಕರಾಗಿದ್ದರು ಎಂದು ಹೇಳಿದ್ದಾರೆ.

ಸಿಂಗ್ ಅವರ ನಿಧನದ ಕುರಿತು ತಮ್ಮ ಸಂದೇಶದಲ್ಲಿ, ಸೋನಿಯಾ ಗಾಂಧಿ ಅವರು, ಭಾರತದ ಪ್ರಗತಿ ಮತ್ತು ಅಭಿವೃದ್ಧಿಗೆ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆಗಳು ಅಪಾರ. ಅವರಂತಹ ನಾಯಕನನ್ನು ನಾವು ಹೊಂದಿದ್ದಕ್ಕಾಗಿ ನಾವು, ಕಾಂಗ್ರೆಸ್ ಪಕ್ಷ ಮತ್ತು ಭಾರತದ ಜನರು ಎಂದೆಂದಿಗೂ ಹೆಮ್ಮೆಪಡುತ್ತೇವೆ ಮತ್ತು ಕೃತಜ್ಞರಾಗಿರುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಡಾ. ಮನಮೋಹನ್ ಸಿಂಗ್ ನಮ್ಮ ದೇಶಕ್ಕೆ ಪೂರ್ಣ ಮನಸ್ಸಿನಿಂದ ಸೇವೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಪ್ರಕಾಶಮಾನವಾದ ಮತ್ತು ಪ್ರೀತಿಯ ಮಾರ್ಗದರ್ಶಕ ಬೆಳಕು, ಅವರ ಸಹಾನುಭೂತಿ ಮತ್ತು ದೃಷ್ಟಿ ಲಕ್ಷಾಂತರ ಭಾರತೀಯರ ಜೀವನವನ್ನು ಸಶಕ್ತಗೊಳಿಸಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read