HomeKarnatakaಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ಮಾಜಿ ಸಚಿವ ಗುಡ್ ಬೈ: ಬೆಂಬಲಿಗರ ಸಭೆಯಲ್ಲಿ ಘೋಷಣೆ: ಜೆಡಿಎಸ್...

ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ಮಾಜಿ ಸಚಿವ ಗುಡ್ ಬೈ: ಬೆಂಬಲಿಗರ ಸಭೆಯಲ್ಲಿ ಘೋಷಣೆ: ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ ತಹಶೀಲ್ಡಾರ್ ಸ್ಪರ್ಧೆ

ಹಾವೇರಿ: ಮಾಜಿ ಸಚಿವ ಮನೋಹರ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಶ್ರೀನಿವಾಸ ಮಾನೆಯವರಿಗೆ ಕಾಂಗ್ರೆಸ್ ನಿಂದ ಹಾನಗಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಸ್ಥಳೀಯರಿಗೆ ಹಾನಗಲ್ ಟಿಕೆಟ್ ಕೊಡಬೇಕು ಎಂದು ಮನೋಹರ್ ತಹಶೀಲ್ದಾರ್ ಆಗ್ರಹಿಸಿದ್ದರು. ಆದರೆ, ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಕೊಡಲಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಮನೋಹರ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾನಗಲ್ ನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಈ ಬಗ್ಗೆ ಮನೋಹರ ತಹಶೀಲ್ದಾರ್ ಘೋಷಣೆ ಮಾಡಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದ್ದಾರೆ. ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ್ ತಹಶೀಲ್ದಾರ್ ಸ್ಪರ್ಧಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular