BREAKING: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ಮನೋಜ್ ಸೋಂಕರ್ ರಾಜೀನಾಮೆ: 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ ಮನೋಜ್ ಸೋಂಕರ್ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹೊಸದಾಗಿ ಆಯ್ಕೆಯಾದ ಚಂಡೀಗಢ ಮೇಯರ್ ಮನೋಜ್ ಸೋಂಕರ್ ಭಾನುವಾರ ರಾಜೀನಾಮೆ ನೀಡಿದ್ದಾರೆ, ಮೇಯರ್ ಚುನಾವಣೆ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಪಂಜಾಬ್ ಬಿಜೆಪಿ ಅಧ್ಯಕ್ಷ ಜಿತೇಂದ್ರ ಮಲ್ಹೋತ್ರಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೂರು ವಿರೋಧ ಪಕ್ಷದ ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವದಂತಿ ಇರುವಾಗಲೇ ರಾಜೀನಾಮೆ ನೀಡಲಾಗಿದೆ. ಚಂಡೀಗಢದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಬಹುದು ಎಂದು ಹೇಳಲಾಗಿತ್ತು. ಅಂತೆಯೇ ಪೂನಂ, ನೇಹಾ ಮುಸಾವತ್ ಮತ್ತು ಗುರುಚರಣ್ ಸಿಂಗ್ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಚಂಡೀಗಢ ಮೇಯರ್ ಚುನಾವಣೆ

ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ ಮತಪತ್ರಗಳನ್ನು ತಿರುಚಿದೆ ಎಂದು ಎಎಪಿ ಮತ್ತು ಕಾಂಗ್ರೆಸ್ ಆರೋಪಿಸಿದೆ. ಈ ಚುನಾವಣೆಯಲ್ಲಿ ರಿಗ್ಗಿಂಗ್ ವಿಚಾರವಾಗಿ ಆಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ಉನ್ನತ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳನ್ನು ಸೇರಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಸಂಖ್ಯೆಯನ್ನು ಬಲಪಡಿಸಲು ಬಯಸಿದೆ.

ಸುಪ್ರೀಂ ಕೋರ್ಟ್ ವಿಚಾರಣೆ

ಫೆಬ್ರವರಿ 5 ರಂದು ಸುಪ್ರೀಂ ಕೋರ್ಟ್ ಚಂಡೀಗಢ ಮೇಯರ್ ಚುನಾವಣೆಯನ್ನು ನಡೆಸಿದ ಚುನಾವಣಾ ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು ಮತ್ತು “ಅವರು ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ”. ಚುನಾವಣಾಧಿಕಾರಿಯ ಕೃತ್ಯವನ್ನು “ಪ್ರಜಾಪ್ರಭುತ್ವದ ಕೊಲೆ” ಎಂದು ಕಟುವಾದ ಮಾತುಗಳಲ್ಲಿ ಹೇಳಿತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಚುನಾವಣಾ ಪ್ರಕ್ರಿಯೆಗಳ ವಿಡಿಯೋ ವೀಕ್ಷಿಸಿದ ನಂತರ ಬೇಸರ ವ್ಯಕ್ತಪಡಿಸಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read