HomeKarnatakaಸಚಿವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಏಕಾಏಕಿ ಸಾವು

ಸಚಿವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಏಕಾಏಕಿ ಸಾವು

ಚಿಕ್ಕಬಳ್ಳಾಪುರ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ನಡೆದಿದೆ.

45 ವರ್ಷದ ನಾಗರಾಜು ಮೃತ ಕಾರ್ಮಿಕ. ಶಿಡ್ಲಘಟ್ಟ ಗ್ರಾಮದ ಮಳ್ಳೂರು ಗ್ರಾಮದ ನಿವಾಸಿಯಾಗಿದ್ದ ನಾಗರಾಜು, ಕಳೆದ ನಾಲ್ಕು ತಿಂಗಳಿಂದ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗರಾಜು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತನ ಪತ್ನಿ ಹೇಳಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular