HomeKarnatakaಪೊಲೀಸರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಪೊಲೀಸರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ನೊಂದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್ ನಲ್ಲಿ ನಡೆದಿದೆ.

ನಾಗರಾಜ್ (47) ಮೃತ ವ್ಯಕ್ತಿ. ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್, ವೈಯಾಲಿಕಾವಲ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸನಾವುಲ್ಲಾ ಕಂಪನಿ ಹಣ ಪಡೆದು ವಂಚಿಸಿದೆ ಎಂದು ನಟರಾಜ್ ಎಂಬುವವರು ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದರು. ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ್ದರಂತೆ. ಇದೇ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಾಗರಾಜ್ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್ ನಿಂದ ಬಡಿದು, ಶೂ ನಿಂದ ಒದ್ದಿದ್ದರು ಎಂದು ಆರೋಪಿಸಲಾಗಿದೆ. ವೈಯಾಲಿಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಕಂಪನಿ ಮಾಲೀಕ ಸನಾವುಲ್ಲಾ, ನಟರಾಜ್, ಎಂ.ಸಿ.ಯರ್ರೇಗೌಡ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular