HomeLatest NewsBIG NEWS: ಮಂತ್ರಾಲಯ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ

BIG NEWS: ಮಂತ್ರಾಲಯ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ

ರಾಯಚೂರು: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿಗಳು ತಕ್ಷಣ ಗೋಶಾಲೆಯಲ್ಲಿದ್ದ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular