HomeLatest Newsಮಂತ್ರಾಲಯ ರಾಯರ ಮಠದಲ್ಲಿ 3.08 ಕೋಟಿ ರೂ. ಕಾಣಿಕೆ ಸಂಗ್ರಹ

ಮಂತ್ರಾಲಯ ರಾಯರ ಮಠದಲ್ಲಿ 3.08 ಕೋಟಿ ರೂ. ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಎಣಿಕೆ ಕಾರ್ಯ ಮಂಗಳವಾರ ನಡೆದಿದ್ದು, 21 ದಿನಗಳ ಅವಧಿಯಲ್ಲಿ 3.08 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಜನವರಿ, ಫೆಬ್ರವರಿ ಸೇರಿ ಒಟ್ಟು 21 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಈ 21 ದಿನದ ಅವಧಿಯಲ್ಲಿ 2,98,13,571 ರೂ. ನಗದು, 10,24,000 ರೂ. ಮೌಲ್ಯದ ನಾಣ್ಯ ಸೇರಿ ಒಟ್ಟು 3,08,37.571 ರೂ. ಹಣ, 13 ಗ್ರಾಂ ಚಿನ್ನ, 1018 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ.

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಬರುವ ಭಕ್ತರು ಕಾಣಿಕೆ ಸಲ್ಲಿಸುತ್ತಾರೆ. 21 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಎಣಿಕೆ ಕಾರ್ಯ ನಡೆದಿದ್ದು, ಮಠದ ಸಿಬ್ಬಂದಿ, ಭಜನಾ ಮಂಡಳಿ ಹಾಗೂ ಸೇವಕರು ಭಾಗವಹಿಸಿದ್ದರು. ಎಣಿಕೆ ಕಾರ್ಯ ಪೂರ್ಣಗೊಂಡಿದ್ದು 3.08 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular