ಬೆಂಗಳೂರು: ಬೆಂಗಳೂರಿನ ಮಂತ್ರಿ ಡೆವಲಪರ್ಸ್ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಂತ್ರಿ ಡೆವಲಪರ್ಸ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

