HomeLatest Newsಮಂತ್ರಿ ಡೆವಲಪರ್ಸ್ ಮೇಲೆ ಮುಂದುವರೆದ ಇಡಿ ದಾಳಿ: ಸುಶೀಲ್ ಮಂತ್ರಿ ನಿವಾಸದಲ್ಲಿ ಪರಿಶೀಲನೆ

ಮಂತ್ರಿ ಡೆವಲಪರ್ಸ್ ಮೇಲೆ ಮುಂದುವರೆದ ಇಡಿ ದಾಳಿ: ಸುಶೀಲ್ ಮಂತ್ರಿ ನಿವಾಸದಲ್ಲಿ ಪರಿಶೀಲನೆ

ಬೆಂಗಳೂರು: ಮಂತ್ರಿ ಡೆವಲಪರ್ಸ್ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳ ದಾಳಿ ಮುಂದುವರೆದಿದೆ. ಮಂತ್ರಿ ಡೆವಲಪರ್ಸ್ ಮಾಲೀಕ ಸುಶೀಲ್ ಮಂತ್ರಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ನಿವಾಸ ಹಾಗೂ ವಿಠಲ್ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ನಿವಾಸಗಳ ಮೇಲೂ ದಾಳಿ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದಲೇ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ ಆರೋಪವನ್ನೂ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಹಣಕಾಸು ವ್ಯವಹಾರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಹಾಗೂ ಇತರೆ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಸಂಸ್ಥೆ ಕೈಗೊಂಡಿದೆ. ಇದೀಗ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ಸಂಸ್ಥಾಪಕರ ಮನೆ ಮೇಲೂ ದಾಳಿ ನಡೆಸಿದೆ.

ದೆಹಲಿ ಕಚೇರಿಯಿಂದ ಬಂದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಲ್ಲಿ ಆಗಮಿಸಿ ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ತಂಡ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.

ಇದೇ ರೀತಿ ಹಣಕಾಸಿನ ಪ್ರಕರಣದಲ್ಲಿ ಇಡಿಯು ಈಗಾಗಲೇ 2022ರಲ್ಲಿ ದಾಳಿ ನಡೆಸಿದ್ದು, 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಅಲ್ಲದೇ ಗ್ರಾಹಕರಿಂದ ಅಪಾರ್ಟ್ಮೆಂಟ್‌ಗಾಗಿ ಹಣ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಆರೋಪವೂ ಕೇಳಿಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular