HomeKarnatakaಮಂತ್ರಿ ಮಾಲ್ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಮಂತ್ರಿ ಮಾಲ್ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಮಲ್ಲೇಶ್ವರದ ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ನಿವಾಸಿ ಟಿ.ಸಿ. ಮಂಜುನಾಥ್(55) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನೆಲೆಸಿದ್ದ ಮಂಜುನಾಥ್ ಗುರುವಾರ ಸಂಜೆ ಮಂತ್ರಿ ಮಾಲ್ ಗೆ ಆಗಮಿಸಿದ್ದಾರೆ. ಕೆಲವೊತ್ತು ಮಾಳ್ ನಲ್ಲಿ ಸುತ್ತಾಡಿದ ಅವರು ರಾತ್ರಿ 9 ಗಂಟೆ ಸುಮಾರಿಗೆ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ, ಬ್ಯಾಂಕ್ ಸೇರಿ ಹಲವೆಡೆ ಸಾಲ ಮಾಡಿಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular