BREAKING NEWS: ಅಪಘಾತದಲ್ಲಿ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು

ನವದೆಹಲಿ: ಅಲ್ವಾರ್ ಬಳಿ ರಸ್ತೆ ಅಪಘಾತದಲ್ಲಿ ಮಾನವೇಂದ್ರ ಸಿಂಗ್ ಅವರ ಪತ್ನಿ ಮತ್ತು ಜಸ್ವಂತ್ ಸಿಂಗ್ ಅವರ ಸೊಸೆ ಸಾವು ಕಂಡಿದ್ದಾರೆ.

ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿ ಇದ್ದ ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಹಣಕಾಸು, ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಬಿಜೆಪಿಯ ಮಾಜಿ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರರಾಗಿರುವ ಮಾನವೇಂದ್ರ ಸಿಂಗ್ ಬಾರ್ಮರ್‌ನ ಸಂಸದಾಗಿದ್ದರು.

ದೆಹಲಿ-ಮುಂಬೈ ಎಕ್ಸ್‌ ಪ್ರೆಸ್‌ ವೇಯಲ್ಲಿ ಹರಿಯಾಣ-ರಾಜಸ್ಥಾನ ಗಡಿ ಬಳಿಯ ನೌಗಾಂವ್‌ನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಅಲ್ವಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು X ನಲ್ಲಿ ಪೋಸ್ಟ್‌ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಮಾನವೇಂದ್ರ ಸಿಂಗ್ ಜಸೋಲ್ ಅವರ ಪತ್ನಿ ಚಿತ್ರಾ ಸಿಂಗ್ ಅವರ ನಿಧನದ ಸುದ್ದಿ ದುಃಖಕರವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಮತ್ತು ಕುಟುಂಬಕ್ಕೆ ಧೈರ್ಯವನ್ನು ನೀಡಲೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಚೇತರಿಕೆ ಕಾಣಲೆಂದು ಹಾರೈಸಿದ್ದಾರೆ.

https://twitter.com/ashokgehlot51/status/1752321620356788294

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read