HomeLatest NewsBIG NEWS: ಸಶಸ್ತ್ರ ಹೋರಾಟ ತಾತ್ಕಾಲಿಕ ಸ್ಥಗಿತ: ನಕ್ಸಲರ ಘೋಷಣೆ: 'ಕದನ ವಿರಾಮ'ಕ್ಕೆ ಸರ್ಕಾರಕ್ಕೆ ಮನವಿ

BIG NEWS: ಸಶಸ್ತ್ರ ಹೋರಾಟ ತಾತ್ಕಾಲಿಕ ಸ್ಥಗಿತ: ನಕ್ಸಲರ ಘೋಷಣೆ: ‘ಕದನ ವಿರಾಮ’ಕ್ಕೆ ಸರ್ಕಾರಕ್ಕೆ ಮನವಿ

ರಾಯಪುರ: ಸಶಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಮಾವೋವಾದಿಗಳು ಘೋಷಿಸಿದ್ದು,  ಸರ್ಕಾರ ‘ಕದನ ವಿರಾಮ’ ಘೋಷಿಸುವಂತೆ ಕೋರಿದ್ದಾರೆ.

ನಿಷೇಧಿತ ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ(ಮಾವೋವಾದಿ), ಶಾಂತಿ ಮಾತುಕತೆಗೆ ಅನುಕೂಲವಾಗುವಂತೆ ತನ್ನ ಸಶಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಆದರೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಒಂದು ತಿಂಗಳ ‘ಕದನ ವಿರಾಮ’ ಘೋಷಿಸಲು ಮತ್ತು ಭದ್ರತಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಸರ್ಕಾರವನ್ನು ಕೇಳಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಛತ್ತೀಸ್‌ ಗಢ ಸರ್ಕಾರ, ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾವೋವಾದಿಗಳು ಹೊರಡಿಸಿದ್ದಾರೆ ಎಂದು ಹೇಳಲಾದ ಹೇಳಿಕೆಯಲ್ಲಿ, ಬಂಡುಕೋರರು ಈ ವಿಷಯದ ಬಗ್ಗೆ ತಮ್ಮ ನಿರ್ಧಾರವನ್ನು ಇಂಟರ್ನೆಟ್ ಮತ್ತು ರೇಡಿಯೋ ಸೇರಿದಂತೆ ಸರ್ಕಾರಿ ಸುದ್ದಿ ಮಾಧ್ಯಮಗಳ ಮೂಲಕ ಹಂಚಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular