HomeLatest NewsBIG NEWS: ಮರಗುಬಾಯಿ ದೇವಿ ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿತ: 6 ಭಕ್ತರು ದುರ್ಮರಣ

BIG NEWS: ಮರಗುಬಾಯಿ ದೇವಿ ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿತ: 6 ಭಕ್ತರು ದುರ್ಮರಣ

ಪುಣೆ: ದೇವಿ ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಭಕ್ತರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ಮೋಠೆವಾಡಿ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯ ಹಳ್ಳಿಯಾಗಿರುವ ಮೋಠೆವಾಡಿ ಗ್ರಾಮದ ಮರಗುಬಾಯಿ ದೇವಸ್ಥಾನದಲ್ಲಿ ಈ ದುರಂತ ಸಂಭವಿಸಿದೆ. ಗೋಡೆ ಕುಸುತಗೊಂಡು 6 ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 15 ಜನರಿಗೆ ಗಂಭೀರ ಗಾಯಗಳಾಗಿದೆ.

ಗೋಡೆಯ ಕೆಳಭಾಗದಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಶಂಕ್ರ್ ವ್ಯಕ್ತವಾಗಿದೆ. ಬಿರುಗಾಳಿ, ಭಾರೀ ಮಳೆಗೆ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಜತ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜತ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular