HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಯಶವಂತಪುರ–ಶಿವಮೊಗ್ಗ ಎಕ್ಸ್​ಪ್ರೆಸ್ ರೈಲು ವಿಸ್ತರಣೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಯಶವಂತಪುರ–ಶಿವಮೊಗ್ಗ ಎಕ್ಸ್​ಪ್ರೆಸ್ ರೈಲು ವಿಸ್ತರಣೆ

ಬೆಂಗಳೂರು: ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಗುಡ್ ನೂಸ್ ನೀಡಿದೆ.

ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ.

ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಬಳಿಕ ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್​ಗೆ ಮಾತ್ರ ಅನ್ವಯಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಟು, ಅಂದು ಬೆಳಗ್ಗೆ 09:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಅಂದೇ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ.

ಶಿವಮೊಗ್ಗ ಟೌನ್​ನಿಂದ ಮುಂದಕ್ಕೆ ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular