HomeIndiaಅಂಬಾನಿ ಪುತ್ರನ ವಿವಾಹಪೂರ್ವ ಸಮಾರಂಭಕ್ಕೆ ಪತ್ನಿಯೊಂದಿಗೆ ಬಂದ ಮಾರ್ಕ್ ಜುಕರ್‌ಬರ್ಗ್: ಬಿಲ್ ಗೇಟ್ಸ್, ಶಾರುಖ್, ರಜನಿ...

ಅಂಬಾನಿ ಪುತ್ರನ ವಿವಾಹಪೂರ್ವ ಸಮಾರಂಭಕ್ಕೆ ಪತ್ನಿಯೊಂದಿಗೆ ಬಂದ ಮಾರ್ಕ್ ಜುಕರ್‌ಬರ್ಗ್: ಬಿಲ್ ಗೇಟ್ಸ್, ಶಾರುಖ್, ರಜನಿ ಸೇರಿ ಗಣ್ಯರ ದಂಡು

ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಗುರುವಾರ ಗುಜರಾತ್‌ನ ಜಾಮ್‌ನಗರಕ್ಕೆ ಆಗಮಿಸಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವರು ಆಗಮಿಸಿದ್ದಾರೆ. ಮಾರ್ಚ್ 1 ರಿಂದ 3 ರವರೆಗೆ ಜಾಮ್‌ನಗರದಲ್ಲಿ ವಿವಾಹ ಪೂರ್ವ ಮಹೋತ್ಸವ ನಡೆಯಲಿದೆ.

ಮಾರ್ಕ್ ಜುಕರ್‌ಬರ್ಗ್ ಮತ್ತು ಪ್ರಿಸ್ಸಿಲ್ಲಾ ಚಾನ್ ಅವರಿಗೆ ಜಾಮ್‌ ನಗರದಲ್ಲಿ ಹಾರ ಹಾಕಿ ಜಾನಪದ ಸಂಗೀತದೊಂದಿಗೆ ಸ್ವಾಗತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೂ ಮುನ್ನ ಪಾಪ್ ಐಕಾನ್ ರಿಹಾನ್ನಾ ಕೂಡ ಜಾಮ್‌ನಗರಕ್ಕೆ ಆಗಮಿಸಿದ್ದರು. ಸಮಾರಂಭದಲ್ಲಿ ಪ್ರದರ್ಶನ ನೀಡಲಿರುವ ಅನೇಕ ಪ್ರಮುಖ ಕಲಾವಿದರಲ್ಲಿ ಅವರು ಒಬ್ಬರಾಗಿದ್ದಾರೆ.

ಅರಿಜಿತ್ ಸಿಂಗ್ ಮತ್ತು ದಿಲ್ಜಿತ್ ದೋಸಾಂಜ್ ಅವರು ಸಹ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದು, ಅವರು ಭವ್ಯವಾದ ಸಮಾರಂಭದಲ್ಲಿ ಪ್ರದರ್ಶನ ನೀಡುತ್ತಾರೆ.

ಶಾರುಖ್ ಖಾನ್, ರಜನಿಕಾಂತ್, ಸಲ್ಮಾನ್ ಖಾನ್, ಅಮೀರ್ ಖಾನ್, ಸಿದ್ಧಾರ್ಥ್ ಮಲ್ಹೋತ್ರಾ, ಸೈಫ್ ಅಲಿ ಖಾನ್ ಮತ್ತು ಇತರರಂತಹ ಸೆಲೆಬ್ರಿಟಿಗಳು ಗುಜರಾತ್‌ನಲ್ಲಿ ನಡೆಯುವ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.

ಅನಂತ್ ಅಂಬಾನಿ ಅವರ ನೇತೃತ್ವದಲ್ಲಿ ಜಾಮ್‌ನಗರದಲ್ಲಿ ನಡೆಯುತ್ತಿರುವ ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಕಾರ್ಯವನ್ನು ಅತಿಥಿಗಳು ವೀಕ್ಷಿಸಲಿದ್ದಾರೆ.

ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಗೇಟ್ಸ್ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಪಾಲ್ಗೊಳ್ಳುವ ವಿವಾಹ ಪೂರ್ವ ಕಾರ್ಯಕ್ರಮಗಳಿಗೆ ಸುಮಾರು 1,000 ಅತಿಥಿಗಳನ್ನು ಆಹ್ವಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular