HomeKarnatakaಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಬೆಂಗಳೂರು: ಇಂದಿನಿಂದ ಸಿಇಟಿ ಅಂಕ ದಾಖಲಾತಿ ಪೋರ್ಟಲ್ ಸಕ್ರಿಯಗೊಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಲ್ಲಿ 2024ನೇ ಸಾಲಿನ ಯುಜಿ ಸಿಇಟಿ ಬರೆದಿರುವವರು ತಮ್ಮ ಅಂಕಗಳನ್ನು ಆನ್ಲೈನ್ ಮೂಲಕ ದಾಖಲಿಸಲು ಮೇ 14ರಿಂದ 20ರವರೆಗೆ ವೆಬ್ ಪೋರ್ಟಲ್ ಸಕ್ರಿಯಗೊಳಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ ಅಭ್ಯರ್ಥಿಗಳು ಮೇ 20ರೊಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು https.kea.kar.nic.in ವೆಬ್ಸೈಟ್ ನಲ್ಲಿ ನಿಗದಿತ ಲಿಂಕ್ ಮೂಲಕ ದಾಖಲಿಸಬೇಕು. ಅಂಕಪಟ್ಟಿಯ ಪಿಡಿಎಫ್ ಪ್ರತಿಯನ್ನು ತಪ್ಪದೇ ಅಪ್ಲೋಡ್ ಮಾಡಬೇಕು. 2024ಕ್ಕೆ ಹಿಂದಿನ ವರ್ಷಗಳಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಮತ್ತು 12ನೇ ತರಗತಿ ಉತ್ತೀರ್ಣರಾದವರೂ ಅಂಕಗಳನ್ನು ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular