BREAKING NEWS: ಮದುವೆ ಮಂಟಪದಲ್ಲಿ ಅಚ್ಚರಿಯ ಘಟನೆ: ತಾಳಿ ಕಟ್ಟುವಾಗ ಮದುವೆ ಬೇಡ ಎಂದು ಹಸೆಮಣೆಯಿಂದ ಎದ್ದ ವಧು

ತುಮಕೂರು: ತುಮಕೂರಿನ ಕೋಳಾಲ ಗ್ರಾಮದಲ್ಲಿ ಸಿನಿಮೀಯ ಘಟನೆ ನಡೆದಿದೆ. ತಾಳಿ ಕಟ್ಟುವ ಶುಭ ವೇಳೆಯಲ್ಲಿ ಮದುವೆ ಬೇಡ ಎಂದು ಹಸೆಮಣೆಯಿಂದ ವಧು ಎದ್ದಿದ್ದಾಳೆ.

ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ನನಗೆ ಮದುವೆ ಬೇಡ ಎಂದು ಹುಡುಗಿ ಹೇಳಿದ್ದು, ವರ ಮತ್ತು ಕುಟುಂಬದವರು ಶಾಕ್ ಆಗಿದ್ದಾರೆ.

ನೆಲಮಂಗಲ ತಾಲೂಕಿನ ದೊಡ್ಡಬೆಲೆ ಯುವತಿ ದಿವ್ಯಾ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಮೂಡ್ಲಕಾಳೇನಹಳ್ಳಿಯ ವೆಂಕಟೇಶ್ ಮದುವೆ ನಿಶ್ಚಯವಾಗಿತ್ತು. ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್ ಆಗಿದ್ದು, ಎಲ್ಲರೂ ಕಂಗಾಲಾಗಿದ್ದಾರೆ.

ನಿನ್ನೆ ರಾತ್ರಿ ಆರತಕ್ಷತೆ ನಡೆಯುವಾಗ ನಗುತ್ತಲೇ ಪೋಸ್ ಕೊಟ್ಟಿದ್ದ ದಿವ್ಯಾ ಬೆಳಗ್ಗೆ ತಾಳಿ ಕಟ್ಟುವ ಕೊನೆ ಕ್ಷಣದಲ್ಲಿ ಮದುವೆ ಬೇಡ ಎಂದು ಹೇಳಿದ್ದು, ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ. ಕೋಳಾಲ ಠಾಣೆಯಲ್ಲಿ ಮಾತುಕತೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read