ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು 52ನೇ ವರ್ಷದ ಸಾಮೂಹಿಕ ವಿವಾಹ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6:45ಕ್ಕೆ ಗೋಧೂಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ವರನಿಗೆ ಪಂಚೆ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುತ್ತದೆ. ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ. ಮದುವೆಯಾಗ ಬಯಸುವವರು ಏಪ್ರಿಲ್ 22 ವಿವರ ಸಹಿತ ಮಾಹಿತಿ ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ದೂರವಾಣಿ ಸಂಖ್ಯೆ 08256 266644, ವಾಟ್ಸಾಪ್ ನಂಬರ್ 96634 64648, 81472 63422 ಸಂಪರ್ಕಿಸುವಂತೆ ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read