HomeKarnatakaಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತ ಯುವತಿ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆರೋಪಿ ಮಲ್ಲಯ್ಯ ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಮತ್ತೆ ಅತ್ಯಾಚಾರ ಎಸಗಿದ್ದು, ಯುವತಿ ಮದುವೆಯಾಗುವಂತೆ ಕೇಳಿಕೊಂಡಾಗ ತಿರಸ್ಕರಿಸಿದ್ದ ಎನ್ನಲಾಗಿದೆ. ಈ ಬಗ್ಗೆ ನೊಂದ ಯುವತಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular