HomeKarnatakaಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ 'ಮದುವೆ' ಅನೂರ್ಜಿತವಾಗಲ್ಲ: ಹೈಕೋರ್ಟ್ ಮಹತ್ವದ ಆದೇಶ

ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ‘ಮದುವೆ’ ಅನೂರ್ಜಿತವಾಗಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ಮದುವೆ ಅನೂರ್ಜಿತವಾಗುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ.

ಪತಿ ತನ್ನ ಪತ್ನಿಯೊಂದಿಗಿನ ವಿವಾಹ ಅನೂರ್ಜಿತಗೊಳಿಸಲು ಅರ್ಜಿ ಸಲ್ಲಿಸಿದ್ದು, ವಿವಾಹವಾದಾಗ ಪತ್ನಿಯ ವಯಸ್ಸು 16 ವರ್ಷ 11 ತಿಂಗಳಾಗಿತ್ತು. ಹಿಂದೂ ವಿವಾಹ ಕಾಯ್ದೆಯಡಿ ಯುವತಿಗೆ 18 ವರ್ಷ, ಯುವಕನಿಗೆ 21 ವರ್ಷ ವಯಸ್ಸಾಗಿರಬೇಕು. ಹೀಗಾಗಿ ಪತ್ನಿಯೊಂದಿಗಿನ ವಿವಾಹ ರದ್ದತಿಗೆ ಪತಿ ಮನವಿ ಮಾಡಿದ್ದು, ಕೌಟುಂಬಿಕ ನ್ಯಾಯಾಲಯ ವಿವಾಹವನ್ನು ಅನುರ್ಜಿತಗೊಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹಿಂದೂ ವಿವಾಹ ಕಾಯ್ದೆಯ ಸೆ. 11 ರ ಅಡಿ ಅನೂರ್ಜಿತವಾಗುವುದಿಲ್ಲ. ವಿವಾಹವನ್ನು ಸೆ. 11 ರ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಹೀಗಾಗಿ ವಿವಾಹ ಅನೂರ್ಜಿತವಲ್ಲವೆಂದು ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಿಂದ ತೀರ್ಪು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular