HomeKarnatakaವಿಚ್ಛೇದನ ಪಡೆಯಲು ಮದುವೆ ನೋಂದಣಿ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ

ವಿಚ್ಛೇದನ ಪಡೆಯಲು ಮದುವೆ ನೋಂದಣಿ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗದಿದ್ದಲ್ಲಿ ವಿಚ್ಛೇದನಕ್ಕೆ ಮದುವೆ ನೋಂದಣಿಯ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಕೆ. ಮನ್ಮಥರಾವ್ ಅವರಿದ್ದ ಏಕ ಸದಸ್ಯ ಈ ಆದೇಶ ನೀಡಿ, ಅರ್ಜಿಯನ್ನು ವಜಾಗೊಳಿಸಿದೆ.

ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಿದ್ದಲ್ಲಿ ವಿಚ್ಛೇದನ ಪಡೆಯಲು ಕೋರಿ ಅರ್ಜಿ ಸಲ್ಲಿಸುವುದಕ್ಕೆ ಮದುವೆಯ ನೋಂದಣಿ ಆಗಬೇಕು ಎನ್ನುವುದು ಕಡ್ಡಾಯ ನಿಯಮವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಮದುವೆ ಕಾಯ್ದೆಯಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಲು ಮದುವೆಯಾಗುವ ಸಂಬಂಧ ನೋಂದಣಿ ಮಾಡುವುದು ಕಡ್ಡಾಯವೆಂದು ಹೇಳುವ ಸಂಬಂಧ ಸ್ಪಷ್ಟತೆ ಇಲ್ಲ. ಸೆಕ್ಷನ್ 15ರಂತೆ ಮದುವೆ ನೋಂದಣಿಗೆ ಅಗತ್ಯವಾದ ಷರತ್ತುಗಳನ್ನು ಮಾತ್ರ ಹೇಳುತ್ತದೆ. ಮದುವೆ ನೋಂದಣಿ ಇಲ್ಲದಿದ್ದರೆ ವಿಚ್ಛೇದನ ಅರ್ಜಿ ಸಲ್ಲಿಸಲಾಗುವುದಿಲ್ಲವೆಂದು ಹೇಳುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಸೆಕ್ಷನ್ 15ರ ಅಡಿ ಮದುವೆ ನೋಂದಣಿ ಆಯ್ಕೆಯಾಗಿದ್ದು, ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ. ನೋಂದಣಿ ಮಾಡಿದಲ್ಲಿ ಸೆಕ್ಷನ್ 18 ರ ಅಡಿ ಕೆಲವು ಹೆಚ್ಚುವರಿ ಕಾನೂನು ಪ್ರಯೋಜನಗಳು ದೊರೆಯುತ್ತವೆ. ಆದರೆ ನೋಂದಣಿ ಇಲ್ಲದಿದ್ದರೆ ವಿಚ್ಛೇದನ ಅರ್ಜಿ ಸಲ್ಲಿಸಲು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪರಿಶಿಷ್ಟ ಪಂಗಡದ ಮೆಡಾ ಸಮುದಾಯಕ್ಕೆ ಸೇರಿದ ದಂಪತಿ 2006ರ ಏಪ್ರಿಲ್ ನಲ್ಲಿ ತಮ್ಮ ಸಮುದಾಯ ಆಚರಣೆಗಳ ಪ್ರಕಾರ ಮದುವೆಯಾಗಿದ್ದರು. ಆದರೆ ಮದುವೆಯನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಲಿಲ್ಲ. ದಂಪತಿಗೆ ಒಂದು ಮಗು ಜನಿಸಿತ್ತು. 2009 ರಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಪತಿ ಕನಕಪುರ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಹಿಂದೂ ವಿವಾಹ ಕಾಯ್ದೆ ಅಡಿ ವಿಚ್ಛೇದನ ಕೋರಿದ್ದರು. ನಂತರ ಪತಿಯ ಕ್ರೌರ್ಯ ಮತ್ತು ದೂರ ನೆಲೆಸಿರುವುದರ ಆಧಾರದಲ್ಲಿ ವಿಚ್ಛೇದನ ಕೋರಿ ಪತ್ನಿ ಅರ್ಜಿ ಸಲ್ಲಿಸಿದ್ದರು.

ಇವರನ್ನು ಹಿಂದೂ ವಿವಾಹ ಕಾಯ್ದೆಯಿಂದ ಹೊರಗಿಡಲಾಗಿದ್ದು ವಿಶೇಷ ವಿವಾಹ ಕಾಯ್ದೆಯಡಿ ಸೇರ್ಪಡೆ ಮಾಡಲಾಗಿದೆ. ಆದ್ದರಿಂದ ಹಿಂದೂ ವಿವಾಹ ಕಾಯ್ದೆ ಅಡಿ ಸಲ್ಲಿಸಿದ ವಿಚ್ಛೇದನ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ನಂತರ ಪತಿ ವಿಶೇಷ ಮದುವೆ ಕಾಯ್ದೆಯ ಸೆಕ್ಷನ್ 27ರ ಅಡಿ ಕ್ರೂರತೆ ಮತ್ತು ಪತ್ನಿಯಿಂದ ಪ್ರತ್ಯೇಕವಾಗಿ ನೆಲೆಸಿರುವುದರ ಆಧಾರದ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಆಕ್ಷೇಪಿಸಿದ್ದ ಪತ್ನಿ ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಿದ್ದಲ್ಲಿ ವಿವಾಹದ ನೋಂದಣಿ ಮಾಡದಿದ್ದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲವೆಂದು ಕೌಟುಂಬಿಕ ನ್ಯಾಯಾಲಯಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಿದ್ದಲ್ಲಿ ವಿಚ್ಛೇದನ ಪಡೆಯಲು ಕೋರಿ ಅರ್ಜಿ ಸಲ್ಲಿಸುವುದಕ್ಕೆ ಮದುವೆಯ ನೋಂದಣಿಯಾಗಬೇಕು ಎನ್ನುವುದು ಕಡ್ಡಾಯ ನಿಯಮವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular