HomeKarnatakaBIG NEWS: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಹಿರೇಕೋಡಿ ಗ್ರಾಮಕ್ಕೆ ದೌಡಾಯಿಸಿದ...

BIG NEWS: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಹಿರೇಕೋಡಿ ಗ್ರಾಮಕ್ಕೆ ದೌಡಾಯಿಸಿದ ಆರೋಗ್ಯ ಅಧಿಕಾರಿಗಳು

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ಮದುವೆ ಸಮಾರಂಭದಲ್ಲಿ ಊಟ ಮಾಡಿ ಮನೆಗೆ ವಾಪಸ್ ಆಗುತ್ತಿದ್ದಂತೆ ವಾಂತಿ-ಭೇದಿ ಆರಂಭವಾಗಿದೆ. ಹಿರೇಕೋಡಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಪಟೇಲ್ ಕುಟುಂಬದ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಗ್ರಾಮದ ಜನರು ಮದುವೆಗೆ ತೆರಳಿ ಊಟ ಮಾಡಿದ್ದರು. ಊಟ ಮಾಡಿ ಮನೆಗೆ ವಾಪಸ್ ಆಗುತ್ತಿದ್ದಂತೆ ವಾಂತಿ-ಭೇದಿ ಶುರುವಾಗಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದುವೆ ಸಮಾರಂಭಕ್ಕೆ ಹೋಗಿದ್ದ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಹಿರೇಕೋಡಿ ಗ್ರಾಮಕ್ಕೆ ದೌಡಾಯಿಸಿದ್ದು, ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಗ್ರಾಮಸ್ಥರ ಆರೋಗ್ಯ ತಪಾಸಣಾ ನಡೆಸಿದ್ದಾರೆ.

ಆರೋಗ್ಯಾಧಿಕಾರಿಗಳು ಮನೆ ಮನೆಗೆ ತರಳಿ ಆರೋಗ್ಯ ತಪಾಸಣೆ ನಡೆಸಲು ನಿರ್ಧರಿಸಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡಿರುವವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular