HomeLatest NewsSHOCKING : ಬೈಕ್ ಅಡ್ಡಗಟ್ಟಿ ಮೈದುನನ ಎದುರೇ ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್.!

SHOCKING : ಬೈಕ್ ಅಡ್ಡಗಟ್ಟಿ ಮೈದುನನ ಎದುರೇ ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್.!

ಉತ್ತರಾಖಂಡ್ ರಾಜ್ಯದ ರುದ್ರಾಪುರ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಕಾಮುಕರು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಭಾನುವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದೆ.

ಸಂತ್ರಸ್ತ ಮಹಿಳೆ ತನ್ನ ಮೈದುನನ (ಗಂಡನ ತಮ್ಮ) ಜೊತೆಗೂಡಿ ‘ಸಾರಸ್ ಮೇಳ’ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು.ರಾತ್ರಿ ವೇಳೆ ಕಿಚ್ಚಾ ಬೈಪಾಸ್ ರಸ್ತೆಯಲ್ಲಿ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಇವರನ್ನು ಅಡ್ಡಗಟ್ಟಿದ್ದಾರೆ. ಪಿಸ್ತೂಲ್ ಮತ್ತು ಚಾಕು ತೋರಿಸಿ ಬೆದರಿಸಿ ಇಬ್ಬರನ್ನೂ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ.

ಮೈದುನನ ಎದುರೇ ಕೃತ್ಯ: ಕಾಮುಕರು ಮಹಿಳೆಯ ಮೈದುನನನ್ನು ಕಟ್ಟಿಹಾಕಿ, ಆತನ ಕಣ್ಣೆದುರೇ ಮಹಿಳೆಯ ಮೇಲೆ ಒಬ್ಬೊಬ್ಬರಾಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವೇಳೆ ಮಹಿಳೆ ಪ್ರತಿರೋಧ ತೋರಿದಾಗ ಚಾಕುವಿನಿಂದ ಆಕೆಯ ಕೈಬೆರಳನ್ನು ಕತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಇಡೀ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಘಟನೆಯ ನಂತರ ಮಹಿಳೆ ನೀಡಿದ ದೂರಿನ ಮೇರೆಗೆ ರುದ್ರಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular