HomeKarnatakaBIG NEWS: ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ...

BIG NEWS: ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ ವಿರುದ್ಧ FIR ದಾಖಲು

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೆಗೆಯುವಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದೆ. ಈ ನಡುವೆ ವಕ್ಫ್ ವಿರುದ್ಧ ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದ್ದ ‘ವಕ್ಫ್ ಹಠಾವೋ, ದೇಶ ಬಚಾವೋ’ ಪ್ರತಿಭಟನೆಯ ವೇಳೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ‘ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ’. ವಕ್ಫ್ ತೆಗೆಯದಿದ್ದರೆ ಜೀವ ತೆಗೆಯೋಕೆ ನಾವು ರೆಡಿ ಎಂದು ಹೇಳಿಕೆ ನೀಡಿದ್ದಾರೆ.

ಪ್ರತಿಭಟನಾ ಧರಣಿಯಲ್ಲಿ ಸ್ವಾಮೀಜಿ ನೀಡಿರುವ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀದಿರುವ ಹಿನ್ನೆಲೆಯಲ್ಲಿ ಇದೀಗ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular