ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಕಡ್ಡಾಯ : ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲಾ ಆರೋಗ್ಯ ಕಾರ್ಯಕರ್ತರು ಮಾಸ್ಕ್ ಧರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು ಆರೋಗ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಕ್ರಿಸ್ಮಸ್ ಹಾಗೂ ನ್ಯೂಇಯರ್ ಸೆಲೆಬ್ರೇಷನ್ಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ. ಮುಂದಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್, ಔಷಧಗಳ ಲಭ್ಯತೆ, ಸಂಗ್ರಹ, ಐಸಿಯು ಮತ್ತು ಹಾಸಿಗೆ ಸಾಮರ್ಥ್ಯಗಳ ಹೆಚ್ಚಳ ಸೇರಿದಂತೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read